ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ. ರಮಾಮಣಿ ಎಸ್ ಆದ ನಾನು 31 ವರ್ಷಗಳಿಂದ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಕನ್ನಡ ಕಲಿಕೆಯನ್ನು ಸರಳಗೊಳಿಸುವುದು ಕನ್ನಡ ಕಲಿಕೆಗೆ ಆದ್ಯತೆ ಕೊಡುವುದು ನನ್ನ ಉದ್ದೇಶ. ಮುಂದಿನ ದಿನಗಳಲ್ಲಿ ಅತ್ಯಂತ ಕಡಿಮೆ ಅಥವಾ ಉಚಿತವಾಗಿ ಕನ್ನಡ ಕಲಿಕೆಯನ್ನು ಅಭಿವೃದ್ಧಿಪಡಿಸುವುದು ನನ್ನ ಕನಸಾಗಿದೆ ಅದಕ್ಕೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ.